ಮಂಗಳೂರಿನ ಸುರತ್ಕಲ್ ರೈಲು ನಿಲ್ದಾಣದಲ್ಲಿ ಚಲಿಸುತ್ತಿದ್ದ ರೈಲಿಗೆ ಹತ್ತಲು ಹೋಗಿ ನಿಯಂತ್ರಣ ಕಳೆದುಕೊಂಡ ವೃದ್ಧನನ್ನು ರಕ್ಷಣೆ ಮಾಡಿರುವಂತಹ ಘಟನೆ ನಡೆದಿದೆ. ರೈಲ್ವೆ ಸಿಬ್ಬಂದಿಗಳ ಸಮಯಪ್ರಜ್ಞೆಯಿಂದ ವೃದ್ಧನನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ. ಈ ಘಟನೆಯ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ವೃದ್ಧನನ್ನು ರಕ್ಷಿಸಿದ ಸಿಬ್ಬಂದಿಗೆಳಿಗೆ ಪ್ರಶಂಸೆ ವ್ಯಕ್ತವಾಗಿದೆ.