ಬಂಗಾಳದಲ್ಲಿ ಚುನಾವಣೆ ವೇಳೆ ಕಲ್ಲಿನಿಂದ ಹೊಡೆದ ಜನ; ಎದ್ದು ಬಿದ್ದು ಓಡಿದ ಬಿಜೆಪಿ ಅಭ್ಯರ್ಥಿ

ಪಶ್ಚಿಮ ಬಂಗಾಳದಲ್ಲಿ ಇಂದು 6ನೇ ಹಂತದ ಲೋಕಸಭಾ ಚುನಾವಣೆ ನಡೆದಿದೆ. ಈ ವೇಳೆ ಜನರ ಗುಂಪೊಂದು ಜಾರ್‌ಗ್ರಾಮ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆನಂದ್ ಅವರ ಮೇಲೆ ಕಲ್ಲುಗಳನ್ನು ಎಸೆದು ದಾಳಿ ನಡೆಸಿದ್ದು, ಕಂಗಾಲಾದ ಆನಂದ್ ಅವರು ತಪ್ಪಿಸಿಕೊಳ್ಳಲು ಪರದಾಡುತ್ತಾ ಓಡಿಹೋಗಿದ್ದಾರೆ. ಅವರನ್ನು ರಕ್ಷಿಸಲು ಅವರ ಭದ್ರತಾ ಸಿಬ್ಬಂದಿ ಕೂಡ ಹರಸಾಹಸ ಪಟ್ಟಿದ್ದಾರೆ.