ಬಂಗಾರಪೇಟೆ ಕಾಂಗ್ರೆಸ್ ಶಾಸಕ ನಾರಾಯಣಸ್ವಾಮಿ ನೀಡಿರುವ ಹೇಳಿಕೆಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಸಚಿವ ರಾಮಲಿಂಗಾರೆಡ್ಡಿ, ಪಕ್ಷದ ಅಧ್ಯಕ್ಷರಾಗಿರುವ ಮಲ್ಲಿಕಾರ್ಜುನ ಖರ್ಗೆ ಪಕ್ಷ ಅಥವಾ ಪಕ್ಷದ ಕಾರ್ಯಕರ್ತರ ಬಗ್ಗೆ ಸಾರ್ವಜನಿಕವಾಗಿ ಹೇಳಿಕೆ ನೀಡಬಾರದೆಂದು ತಿಳಿಸಿದ್ದಾರೆ, ನಾಲ್ಕು ಗೋಡೆಗಳ ನಡುವೆ ಮಾತ್ರ ತಾನು ಮಾತಾಡೋದು ಮತ್ತು ನಾರಾಯಣಸ್ವಾಮಿಗೂ ಅದೇ ಸಲಹೆ ನೀಡುತ್ತೇನೆ ಎಂದರು.