ಬೆಂಗಳೂರಿನ ಚಂದ್ರಲೇಔಟ್ನಲ್ಲಿ ಎಸ್ಎಸ್ಎಲ್ಸಿ ಓದುತ್ತಿರುವ ಇಬ್ಬರು ಬಾಲಕರ ಮೇಲೆ ಕಟ್ಟಿಗೆಗಳಿಂದ ಹಲ್ಲೆ ನಡೆದಿದೆ. ಮಾರ್ಚ್ 17ರಂದು ನಡೆದ ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಬಾಲಕರ ಕೈ ಮತ್ತು ಕುತ್ತಿಗೆಗೆ ಗಾಯಗಳಾಗಿವೆ. ಪೋಷಕರ ದೂರಿನ ಮೇರೆಗೆ ಐವರ ವಿರುದ್ಧ ಎಫ್ಐಆರ್ ದಾಖಲಾಗಿದೆ ಮತ್ತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.