ಅಮೆರಿಕದಿಂದ ಅಮೃತಸರಕ್ಕೆ ಬಂದಿಳಿದ 116 ಅಕ್ರಮ ವಲಸಿಗರನ್ನು ಹೊತ್ತ ಎರಡನೇ ವಿಮಾನ

116 ಅಕ್ರಮ ಭಾರತೀಯ ವಲಸಿಗರನ್ನು ಹೊತ್ತ ಅಮೆರಿಕದ ವಿಮಾನ ಶನಿವಾರ ತಡರಾತ್ರಿ ಅಮೃತಸರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ರಾತ್ರಿ 10 ಗಂಟೆಗೆ ನಿಗದಿಯಾಗಿದ್ದ ಸಮಯಕ್ಕೆ ಬದಲಾಗಿ, ಸಿ-17 ವಿಮಾನವು ರಾತ್ರಿ 11.35 ರ ಸುಮಾರಿಗೆ ವಿಮಾನ ನಿಲ್ದಾಣಕ್ಕೆ ಬಂದಿಳಿದಿದೆ ಎಂದು ಮೂಲಗಳು ತಿಳಿಸಿವೆ. ಅಕ್ರಮ ವಲಸಿಗರ ವಿರುದ್ಧದ ಕಠಿಣ ಕ್ರಮದ ಭಾಗವಾಗಿ ಡೊನಾಲ್ಡ್ ಟ್ರಂಪ್ ಆಡಳಿತವು ಗಡೀಪಾರು ಮಾಡುತ್ತಿರುವ ಅಂತಹ ಭಾರತೀಯರ ಎರಡನೇ ಬ್ಯಾಚ್ ಇದಾಗಿದೆ.