ಮನೆಯ ಜಾನುವಾರು ಕೊಟ್ಟಿಗೆಗೆ ಚಿರತೆ ಸೇರಿಕೊಂಡಿರುವಂತಹ ಘಟನೆ ಹಾಸನ ತಾಲ್ಲೂಕಿನ ಹೊಸಳ್ಳಿ ಗ್ರಾಮದ ಮಹೇಶ್ ಎಂಬುವವರ ಮನೆಯಲ್ಲಿ ಕಂಡುಬಂದಿದೆ. ತಮ್ಮ ಜಮೀನಿನಲ್ಲಿ ಮನೆ ನಿರ್ಮಿಸಿ ಕುಟುಂಬ ವಾಸವಾಗಿದ್ದು, ಮನೆಗೆ ಹೊಂದಿಕೊಂಡಿರುವ ದನದ ಕೊಟ್ಟಿಗೆಯಲ್ಲಿ ಚಿರತೆ ಸಿಲುಕಿದೆ.