ಪತ್ನಿ ಸ್ನೇಹಿತೆ ಮೇಲೆ ಹಲ್ಲೆ ಮಾಡಿದ ಗಂಡ

ಶಿವಮೊಗ್ಗದಲ್ಲಿ ಪತ್ನಿಯ ಸ್ನೇಹಿತೆಯ ಮೇಲೆ ಪತಿ ಆಸ್ಪತ್ರೆಯಲ್ಲಿಯೇ ಹಲ್ಲೆ ಮಾಡಿರುವಂತಹ ಘಟನೆ ನಡೆದಿದೆ. ಪತ್ನಿ ಆತ್ಮಹತ್ಯೆಗೆ ಯತ್ನಿಸಿದ ಬಳಿಕ ಆಕೆಯ ಸ್ನೇಹಿತೆ ಆಸ್ಪತ್ರೆಗೆ ಸೇರಿಸಿದ್ದಾರೆ. ಈ ವಿಚಾರವಾಗಿ ಹಲ್ಲೆ ಮಾಡಲಾಗಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.