‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ಎಷ್ಟು ಭಾಷೆಗಳಲ್ಲಿ ರಿಲೀಸ್? ರಕ್ಷಿತ್ ನೀಡಿದ್ರು ಮಾಹಿತಿ

ರಕ್ಷಿತ್ ಶೆಟ್ಟಿ ನಟನೆಯ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ರಿಲೀಸ್ಗೆ ರೆಡಿ ಇದೆ. ಸೆಪ್ಟೆಂಬರ್ 1ರಂದು ಸಿನಿಮಾ ತೆರೆಗೆ ಬರುತ್ತಿದೆ. ಈಗ ಪ್ಯಾನ್ ಇಂಡಿಯಾ ಸಿನಿಮಾ ಜಮಾನ. ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ಕೂಡ ಹಲವು ಭಾಷೆಗಳಲ್ಲಿ ರಿಲೀಸ್ ಆಗಲಿದೆ ಎಂದು ಎಲ್ಲರೂ ಭಾವಿಸಿದ್ದರು. ಆದರೆ, ರಕ್ಷಿತ್ ಇದಕ್ಕೆ ಟ್ವಿಸ್ಟ್ ನೀಡಿದ್ದಾರೆ. ‘ಈ ಸಿನಿಮಾ ಈಗ ಕನ್ನಡದಲ್ಲಿ ಮಾತ್ರ ರಿಲೀಸ್ ಆಗುತ್ತಿದೆ. ಉಳಿದ ಭಾಷೆಗಳಿಗೆ ನಾವು ಡಬ್ ಮಾಡಿ ಇಟ್ಟುಕೊಂಡಿದ್ದೇವೆ. ಈ ಚಿತ್ರವೇ ನಮ್ಮನ್ನು ಪರಭಾಷೆಗೆ ಕರೆದುಕೊಂಡು ಹೋಗುತ್ತದೆ ಎನ್ನುವ ನಂಬಿಕೆ ನನಗಿದೆ’ ಎಂದಿದ್ದಾರೆ ರಕ್ಷಿತ್ ಶೆಟ್ಟಿ. ಈ ವೇಳೆ ಅವರು ‘ಕಾಂತಾರ’ ಚಿತ್ರವನ್ನು ನೆನಪಿಸಿಕೊಂಡರು.