ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಒಂದು ಸರಣಿ ಅಪಘಾತಗಳು ಸಂಭವಿಸಿವೆ. ಮೊದಲು ಒಂದು ವಿಮಾನಕ್ಕೆ ಟಿಟಿ ವಾಹನವೊಂದು ಡಿಕ್ಕಿ ಹೊಡೆದಿದ್ದರೆ, ಬಳಿಕ ರನ್‌ವೇಯಲ್ಲಿ ಚಲಿಸುತ್ತಿದ್ದ ಕಾರು ಕಂಬಕ್ಕೆ ಡಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದ ಸಿಬ್ಬಂದಿ ಅಪಾಯದಿಂದ ಪಾರಾಗಿದ್ದಾರೆ.