ರಘುರಾಮ್ ರಾಜನ್​​ ಅವರದ್ದು ಅತಿರೇಕದ ಮಾತು; ಅಶ್ವಿನಿ ವೈಷ್ಣವ್ ತಿರುಗೇಟು

ನವದೆಹಲಿ: ಟೆಲಿಕಾಂ ಕ್ಷೇತ್ರದಲ್ಲಿ ಭಾರತ ಅಭಿವೃದ್ಧಿ ಕಾಣುತ್ತಿಲ್ಲ ಎಂಬ ಆರ್​ಬಿಐ ಮಾಜಿ ಗವರ್ನರ್ ರಘುರಾಮ್ ರಾಜನ್ ಟೀಕೆಗೆ ಬಿಜೆಪಿಯ ಹಿರಿಯ ನಾಯಕ ಮತ್ತು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ತೀಕ್ಷ್ಣ ತಿರುಗೇಟು ನೀಡಿದ್ದಾರೆ. ರಘುರಾಂ ರಾಜನ್ ಅವರು 2014ರ ಮೊದಲು ಏನಾಗಿದ್ದರು, ಆ ನಂತರ ಏನಾದರು ಎಂಬುದು ಎಲ್ಲರಿಗೂ ಗೊತ್ತಿದೆ ಎಂದು ಅವರು ಹೇಳಿದ್ದಾರೆ.