ಲಕ್ಷ್ಮೀ ಹೆಬ್ಬಾಳ್ಕರ್‌- ಸತೀಶ್ ಜಾರಕಿಹೊಳಿ ಮಧ್ಯೆ ಕೋಲ್ಡ್​ ವಾರ್ ಇದೆಯಾ?

ಹಾಲಿ ಕಾಂಗ್ರೆಸ್​​ ಸರ್ಕಾರದಲ್ಲಿ ಸಚಿವರುಗಳಾದ, ಒಂದೇ ಜಿಲ್ಲೆಯ ಲಕ್ಷ್ಮೀ ಹೆಬ್ಬಾಳ್ಕರ್‌ ಮತ್ತು ಸತೀಶ್ ಜಾರಕಿಹೊಳಿ ಮಧ್ಯೆ ಕೋಲ್ಡ್​ ವಾರ್ ಇದೆಯಾ? ಅದರಲ್ಲೂ ವರ್ಗಾವಣೆ ವಿಚಾರದಲ್ಲಿ ಸಚಿವೆ ಲಕ್ಷ್ಮೀ ಜತೆ ಸತೀಶ್ ಮುನಿಸಿಕೊಂಡಿದ್ದಾರಾ ಎಂಬ ಚರ್ಚೆ ಶುರುವಾಗಿದೆ. ಈ ಬಗ್ಗೆ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ‌ ಮಾತನಾಡಿದ್ದು ಸಮಯ- ಸಂದರ್ಭವನ್ನು ಸ್ಪಷ್ಟಪಡಿಸುತ್ತಾ ವಿಷಯ ತಿಳಿಗೊಳಿಸಿದ್ದಾರೆ. ಈ ವಿಚಾರ ನನಗೆ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಸಂಬಂಧ ಇಲ್ಲ. ಡಿಡಿಪಿಐ ವರ್ಗಾವಣೆ ಸ್ಥಳೀಯ ಶಾಸಕ ರಾಜು ಸೇಠ್‌ಗೆ ಬಿಟ್ಟ ವಿಚಾರ, ಅದು ಶಿಕ್ಷಣ ಇಲಾಖೆ ವ್ಯಾಪ್ತಿಗೆ ಒಳಪಡುತ್ತದೆ. ಇದನ್ನು ಸರಿಪಡಿಸಲು ಸೂಚಿಸುತ್ತೇನೆ ಎಂದಿದ್ದಾರೆ ಸತೀಶ್ ಜಾರಕಿಹೊಳಿ.