ಮೋದಿ ವಿಶ್ವದಲ್ಲೇ ಅತ್ಯಂತ ಜನಪ್ರಿಯ, ಪ್ರಮುಖ ನಾಯಕ; ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಶ್ಲಾಘನೆ

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ವಿಶ್ವದಲ್ಲೇ ಅತ್ಯಂತ ಜನಪ್ರಿಯ ಹಾಗೂ ಪ್ರಮುಖ ನಾಯಕ ಎಂದು ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ (Giorgia Meloni) ಬಣ್ಣಿಸಿದ್ದಾರೆ. ದೆಹಲಿಯ ಹೈದರಾಬಾದ್ ಹೌಸ್‌ನಲ್ಲಿ ಮೋದಿ ಜತೆ ದ್ವಿಪಕ್ಷೀಯ ಮಾತುಕತೆ ನಡೆಸಿದ ಬಳಿಕ ಜಂಟಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಮೋದಿ ಅವರು ವಿಶ್ವದ ಪ್ರಮುಖ ನಾಯಕರಾಗಿದ್ದಕ್ಕಾಗಿ ಅವರಿಗೆ ಅಭಿನಂದನೆಗಳು. ಅವರು ಜಾಗತಿಕ ಮಟ್ಟದ ಎಲ್ಲ ನಾಯಕರ ಪೈಕಿ ಅತ್ಯಂತ ಪ್ರೀತಿಪಾತ್ರರಾಗಿದ್ದಾರೆ. ಅವರು ಜಾಗತಿಕ ಮಟ್ಟದ ಪ್ರಮುಖ ನಾಯಕ ಎಂಬುದು ಸಾಬೀತಾಗಿದೆ. ಇದಕ್ಕಾಗಿ ಅವರನ್ನು ಅಭಿನಂದಿಸುತ್ತೇನೆ ಎಂದು ಹೇಳಿದರು. ರಕ್ಷಣೆ, ಇಂಧನ, ಸೈಬರ್ ಭದ್ರತೆ ಹಾಗೂ ಇತರ ಕ್ಷೇತ್ರಗಳಲ್ಲಿ ಭಾರತದೊಂದಿಗೆ ಸಹಭಾಗಿತ್ವವನ್ನು ಹೆಚ್ಚಿಸುವ ಗುರಿ ಹೊಂದಿದ್ದೇವೆ ಎಂದೂ ಅವರು ತಿಳಿಸಿದರು.