ಡಿಸಿಎಂ ಡಿಕೆ ಶಿವಕುಮಾರ್ ಶುಕ್ರವಾರ ಬೆಳ್ಳಂಬೆಳಗ್ಗೆಯೇ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ಎಸ್ ಡ್ಯಾಂಗೆ ಭೇಟಿ ನೀಡಿದರು. ಕಾವೇರಿ ಅಮ್ಯೂಸ್ಮೆಂಟ್ ಪಾರ್ಕ್ ಸೇರಿದಂತೆ ಸರ್ಕಾರವು ಕೆಆರ್ಎಸ್ ಡ್ಯಾಂನಲ್ಲಿ ಹಮ್ಮಿಕೊಂಡಿರುವ ಹಲವು ಅಭಿವೃದ್ಧಿ ಯೋಜನೆಗಳ ಬಗ್ಗೆ ಪರಿಶೀಲನೆ ನಡೆಸಿದರು.