ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಐಪಿಎಲ್ 18ನೇ ಆವೃತ್ತಿಯ ಫೈನಲ್ ಪಂದ್ಯವನ್ನು ಗೆದ್ದು ಚಾಂಪಿಯನ್ ಆಗಿದೆ. ತಂಡದ ಆಟಗಾರರು ಬೆಂಗಳೂರಿಗೆ ಆಗಮಿಸಿದ್ದು, ವಿಧಾನಸೌಧದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಕನ್ನಡ ಧ್ವಜದೊಂದಿಗೆ ಅದ್ಧೂರಿಯಾಗಿ ಸ್ವಾಗತಿಸಿದರು. ಆರ್ಸಿಬಿ ಆಟಗಾರರನ್ನು ಕಾಣಲು ಅಭಿಮಾನಿಗಳು ವಿಧಾನಸೌಧ ಮತ್ತು ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತಮುತ್ತ ಸೇರಿದ್ದರು. ವಿಜಯೋತ್ಸವದ ವಾತಾವರಣ ನಗರದಲ್ಲಿ ತುಂಬಿದೆ.