ಚನ್ನಪಟ್ಟಣಾ ಕ್ಷೇತ್ರಕ್ಕೆ ಅಭ್ಯರ್ಥಿಯನ್ನು ಅಂತಿಮಗೊಳಿಸುವುದು ಎನ್ಡಿಎ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಕಗ್ಗಂಟಾಗಿ ಬಿಟ್ಟಿದೆ. ಜೆಡಿಎಸ್ ಪಕ್ಷ ತನ್ನ ಅಭ್ಯರ್ಥಿ ಸ್ಪರ್ಧಿಸಲಿದ್ದಾರೆ ಎನ್ನುತ್ತಿದ್ದರೆ, ಬಿಜೆಪಿ ಸಿಪಿ ಯೋಗೇಶ್ವರ್ಗೆ ಟಿಕೆಟ್ ನೀಡಲು ತುದಿಗಾಲಲ್ಲಿ ನಿಂತಿದೆ. ಏತನ್ಮಧ್ಯೆ ಕಾಂಗ್ರೆಸ್ ನಾಯಕರು ಕಾದು ನೋಡುವ ತಂತ್ರಕ್ಕೆ ಶರಣಾಗಿದ್ದಾರೆ.