ನಾಳೆ ಮೈಸೂರಿನಲ್ಲಿ ಮಹಿಷ ದಸರಾ ಆಚರಣೆಗೆ ಮಹಿಷ ಮೂರ್ತಿಗೆ ಪುಷ್ಪಾರ್ಚನೆ ಮಾಡುವುದಕ್ಕೆ ಪ್ಲ್ಯಾನ್ ಮಾಡಲಾಗುತ್ತಿದೆ. ಆದರೆ ನಾಳೆ ಚಾಮುಂಡಿ ಬೆಟ್ಟದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಹೀಗಾಗಿ ನಾಳೆ ಬಿಜೆಪಿ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ಕೈ ಬಿಟ್ಟಿದೆ. ಒಂದೇ ವೇಳೆ ಮಹಿಷ ಮೂರ್ತಿಗೆ ಪುಷ್ಪಾರ್ಚನೆ ನಡೆದರೆ ಸುಮ್ಮನೆ ಇರುವುದಿಲ್ಲ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಕಿಡಿಕಾರಿದ್ದಾರೆ.