ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಯುದ್ಧ ಪೀಡಿತ ಉಕ್ರೇನ್‌ಗೆ ಆಗಮಿಸಿದ್ದು, ಕೈವ್ ರೈಲು ನಿಲ್ದಾಣದಲ್ಲಿ ಅವರಿಗೆ ಕೈ ಮುಗಿದು ನಮಸ್ಕಾರ ಮಾಡಿ ಉಕ್ರೇನ್ನ ಅಧಿಕಾರಿಗಳು ಸ್ವಾಗತಿಸಿರುವ ಫೋಟೋಗಳು, ವಿಡಿಯೋಗಳು ವೈರಲ್ ಆಗಿವೆ. ಇದಾದ ಬಳಿಕ ಪ್ರಧಾನಿ ಮೋದಿ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರನ್ನು ಭೇಟಿಯಾಗಿದ್ದಾರೆ.