ಕೆಲ ಸಚಿವರು ನೇಹಾಳ ಮನೆಗೆ ಹೋಗಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದು ಬಿಟ್ಟರೆ, ಈ ಹೇಯ ಕೃತ್ಯವನ್ನು ಖಂಡಿಸಿಲ್ಲ ಮತ್ತು ಕೊಲೆಗಡುಕನನ್ನು ಗಲ್ಲಿಗೇರಿಸುವ ಶಿಕ್ಷೆಗೆ ತಮ್ಮ ಸರ್ಕಾರ ಬದ್ಧವಾಗಿದೆ ಅಂತ ಹೇಳಿಲ್ಲ ಎಂದು ಹೇಳಿದರು. ಅನುಕಂಪದ ಮಾತುಗಳನ್ನಾಡುತ್ತಾ ಮೊಸಳೆ ಕಣ್ಣೀರು ಸುರಿಸುತ್ತಿರುವ ಸರ್ಕಾರದ ವಿರುದ್ಧ ರಾಜ್ಯದೆಲ್ಲೆಡೆ ಅಸಮಾಧಾನ ಭುಗಿಲೆದ್ದಿದೆ, ಈ ಪ್ರಕರಣದ ತನಿಖೆ ಸಿಬಿಐನಿಂದ ಮಾಡಿಸಬೇಕು ಎಂದು ಬಿಜೆಪಿ ಆಗ್ರಹಿಸುತ್ತದೆ ಎಂದು ಯತ್ನಾಳ್ ಹೇಳಿದರು.