ಮಾರಿಷಸ್ ತಲುಪಿದ ಪ್ರಧಾನಿ ಮೋದಿ

ಮಾರಿಷಸ್‌ನ ರಾಷ್ಟ್ರೀಯ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಬೆಳಗ್ಗೆ ಮಾರಿಷಸ್‌ ತಲುಪಿದರು. ಮೋದಿ ಮಾರಿಷಸ್ ಭೇಟಿ ಸಂದರ್ಭದಲ್ಲಿ ಭಾರತ ಮತ್ತು ಮಾರಿಷಸ್ ನಡುವೆ ಸಾಮರ್ಥ್ಯ ವೃದ್ಧಿ, ವ್ಯಾಪಾರ ಮತ್ತು ಆರ್ಥಿಕ ಅಪರಾಧಗಳನ್ನು ಎದುರಿಸುವ ಕುರಿತು ಹಲವಾರು ಒಪ್ಪಂದಗಳು ಏರ್ಪಡಲಿವೆ.