ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 'ಪ್ರಧಾನ ಮಂತ್ರಿ ಇಂಟರ್ನ್‌ಶಿಪ್ ಸ್ಕೀಮ್ ಆ್ಯಪ್' ಅನ್ನು ಬಿಡುಗಡೆ ಮಾಡಿದ್ದಾರೆ. ಈ ವೇಳೆ ಪ್ರಧಾನಿ ಮೋದಿಯವರ ದೂರದೃಷ್ಟಿಯ ವಿಧಾನವನ್ನು ಶ್ಲಾಘಿಸಿದ್ದಾರೆ. 'ಪಿಎಂ ಇಂಟರ್ನ್‌ಶಿಪ್ ಸ್ಕೀಮ್ ಆ್ಯಪ್' ಬಿಡುಗಡೆ ಸಂದರ್ಭದಲ್ಲಿ ಉದ್ಯೋಗದ ದಾಖಲಾತಿಗಳನ್ನು ಹೆಚ್ಚಿಸಲು, ಉದ್ಯೋಗಾಕಾಂಕ್ಷಿಗಳು ಮತ್ತು ಉದ್ಯೋಗದಾತರಿಗೆ ಬೆಂಬಲ ನೀಡಲು ಐದು ವಿಭಿನ್ನ ಯೋಜನೆಗಳನ್ನು ಘೋಷಿಸಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು.