ವಕ್ಫ್ ವಿಚಾರವಾಗಿ ಅಲ್ಪಸಂಖ್ಯಾತರ ಆಯೋಗದ ಮಾಜಿ ಅಧ್ಯಕ್ಷ ಅನ್ವರ್ ಮಾಣಿಪ್ಪಾಡಿಗೆ 150 ಕೋಟಿ ರೂ. ಆಮಿಷವೊಡ್ಡಿದ ಆರೋಪಕ್ಕೆ ವಿಧಾನಮಂಡಲ ಅಧಿವೇಶನದಲ್ಲೇ ಸ್ಪಷ್ಟನೆ ನೀಡಿರುವ ಬಿವೈ ವಿಜಯೇಂದ್ರ, ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅಲ್ಲದೆ, ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲಿ ಎಂದು ಆಗ್ರಹಿಸಿದ್ದಾರೆ.