ರಾಯಚೂರಿನಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ನಾಯಕಿ ತೇಜಸ್ವಿನಿ ಗೌಡ ತಾನು ಮೋದಿಯನ್ನು ವಿರೋಧಿಸುತ್ತಿಲ್ಲ. ಆದರೆ, ಬಿಜೆಪಿ ಈ ದೇಶಕ್ಕೆ ಸೂಕ್ತವಾದ ಪಕ್ಷವಲ್ಲ ಎನ್ನುವುದಾಗಿ ಅವರು ಹೇಳಿದ್ದಾರೆ. ಕೆ ಅಣ್ಣಾಮಲೈ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ತೇಜಸ್ವಿನಿ ಗೌಡ, ಅವರು ಯಾವ ದೊಡ್ಡ ಪಿಡಿಂಗಿ ನಾಯಕ ಎಂದು ಕೇಳಿ ವ್ಯಂಗ್ಯ ಮಾಡಿದ್ದಾರೆ. ಕರ್ನಾಟಕದಲ್ಲಿ ಆಫೀಸರ್ ಆಗಿದ್ದವರು ಮೇಕೆದಾಟು ಯೋಜನೆಯನ್ನು ವಿರೋಧಿಸುತ್ತಾರೆ. ಅಂಥವರನ್ನು ಕರ್ನಾಟಕ ಬಿಜೆಪಿ ಉಸ್ತುವಾರಿ ಮಾಡಲಾಗಿದೆ ಎಂದು ರಾಜ್ಯ ಬಿಜೆಪಿ ಬಗ್ಗೆ ಮರುಕ ವ್ಯಕ್ತಪಡಿಸಿದ್ದಾರೆ.