2 ಸಮುದಾಯಗಳ ನಡುವೆ ಭೂಪಾಲ್​ನಲ್ಲಿ ಹಿಂಸಾತ್ಮಕ ಘರ್ಷಣೆ; 6 ಜನರಿಗೆ ಗಾಯ

ಭೂಪಾಲ್​ನಲ್ಲಿ ಹಿಂಸಾತ್ಮಕ ಘರ್ಷಣೆಯೊಂದು ನಡೆದಿದ್ದು, ಈ ಘಟನೆಯಲ್ಲಿ 6 ಜನರು ಗಾಯಗೊಂಡಿದ್ದಾರೆ. ಎರಡು ಸಮುದಾಯಗಳ ನಡುವಿನ ಹಿಂಸಾತ್ಮಕ ಘರ್ಷಣೆಯಲ್ಲಿ ಕಲ್ಲು ತೂರಾಟ ಮತ್ತು ಕತ್ತಿಗಳನ್ನು ಹಿಡಿದುಕೊಂಡು ಹೊಡೆದಾಡುತ್ತಿರುವ ದೃಶ್ಯವನ್ನು ಮೊಬೈಲ್​ನಲ್ಲಿ ಸೆರೆಹಿಡಿಯಲಾಗಿದೆ. ಎರಡೂ ಗುಂಪಿನವರು ಪರಸ್ಪರ ಕಲ್ಲು ತೂರಾಟ ನಡೆಸಿ, ತಮ್ಮ ಶಕ್ತಿ ಪ್ರದರ್ಶನಕ್ಕೆ ಕೈಯಲ್ಲಿ ಕತ್ತಿ ಹಿಡಿದು ಅಟ್ಟಿಸಿಕೊಂಡು ಹೋಗಿದ್ದಾರೆ.