ವಿರೋದ ಪಕ್ಷದ ನಾಯಕ ಆರ್ ಅಶೋಕ ಸುದ್ದಿಗೋಷ್ಟಿ

ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವ ಭರದಲ್ಲಿ ಸಿದ್ದರಾಮಯ್ಯ ಸರ್ಕಾರ ಅಭಿವೃದ್ಧಿ ಕಾರ್ಯಗಳನ್ನು ಸಂಪೂರ್ಣವಾಗಿ ಕಡೆಗಣಿಸಿದೆ ಎಂದು ಅಶೋಕ ಹೇಳಿದರು. ಒಂದು ರಸ್ತೆ ದುರಸ್ತಿ ಕಾಣುತ್ತಿಲ್ಲ, ಯಾವುದೇ ನೀರಾವರಿ ಯೋಜನೆ ಬಗ್ಗೆ ಸರ್ಕಾರ ಯೋಚನೆ ಮಾಡಿಲ್ಲ, ಮಳೆಗಾಲದಲ್ಲಿ ತೊಂದರೆಗೊಳಗಾಗುವ ಪ್ರದೇಶಗಳಲ್ಲಿ ಸೇತುವೆಗಳನ್ನು ನಿರ್ಮಿಸುವ ಕೆಲಸ ಕೈಗೆತ್ತಿಕೊಂಡಿಲ್ಲ ಎಂದು ಅಶೋಕ ಹೇಳಿದರು.