ಬೆಂಗಳೂರಿನ ಬಸವೇಶ್ವರನಗರದ ಭದ್ರಪ್ಪ ಲೇಔಟ್‌ನಲ್ಲಿರುವ ಮೂರು ಅಂತಸ್ತಿನ ಕಟ್ಟಡದ ನೆಲ ಮಹಡಿಯಲ್ಲಿ ಬಿರುಕು ಕಾಣಿಸಿಕೊಂಡಿದೆ. ಇದರಿಂದ ಕಟ್ಟಡ ಕುಸಿಯುವ ಭೀತಿ ಎದುರಾಗಿದ್ದು, 25 ನಿವಾಸಿಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ಬಿಜೆಪಿ ಶಾಸಕ ಕೆ. ಗೋಪಾಲಯ್ಯ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.