ಬೆಂಗಳೂರು, ಸೆ.15: ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ಉದ್ಯಮಿಗೆ ಐದು ಕೋಟಿ ರೂಪಾಯಿ ವಂಚಿಸಿದ ಪ್ರಕರಣ ಸಂಬಂಧ ನಿನ್ನೆಯಿಂದ ಚೈತ್ರಾ ಕುಂದಾಪುರ ಅವರನ್ನು ಸಿಸಿಬಿ ಪೊಲೀಸರು ತಿವ್ರ ವಿಚಾರಣೆ ನಡೆಸುತ್ತಿದ್ದಾರೆ. ವಿಚಾರಣೆಯ ಎರಡನೇ ದಿನವಾದ ಇಂದು ಚೈತ್ರಾ ಅನಾರೋಗ್ಯದಿಂದ ಕುಸಿದುಬಿದ್ದಿರುವುದಾಗಿ ತಿಳಿದುಬಂದಿದೆ. ಕೂಡಲೇ ಅವರನ್ನು ಸಿಸಿಬಿ ಕಚೇರಿಯಿಂದ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.