ಮಕ್ಕಳಿಗೆ ನೀಡಬೇಕಿದ್ದ ಪೌಷ್ಠಿಕ ಆಹಾರ ಕದ್ದು ಸಾಗಾಟ: ಗದಗ ಸರ್ಕಾರಿ ಶಾಲಾ ಸಿಬ್ಬಂದಿಯನ್ನು ರೆಡ್ ಹ್ಯಾಂಡ್ ಆಗಿ ಹಿಡಿದ ಗ್ರಾಮಸ್ಥರು

ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಗಂಡು ಮಕ್ಕಳ ಶಾಲೆಯಲ್ಲಿನ ರೇಷನ್​ ಅನ್ನು ಸಿಬ್ಬಂದಿಗಳು ತೆಗೆದುಕೊಂಡು ಹೋಗುತ್ತಿರುವಾಗ ಸ್ಥಳೀಯರು ಹಿಡಿದಿರುವಂತಹ ಘಟನೆ ನಡೆದಿದೆ. ಶಿಕ್ಷಣ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.