ಕಿರುಸೇತುವೆ ಸಂಪೂರ್ಣ ಜಲಾವೃತ

ಭಾರೀ ಪ್ರಮಾಣದಲ್ಲಿ ಮಳೆ ಸುರಿದಿರುವ ಕಾರಣ ಬೂದಿಹಾಳ ಕಿರುಸೇತುವೆಯಲ್ಲದೆ ಇನ್ನೂ 6-7 ಸೇತುವೆಗಳು ಜಲಾವೃತಗೊಂಡು ವಾಹನ ಮತ್ತು ಜನ ಸಂಚಾರಕ್ಕೆ ದೊಡ್ಡ ಸಮಸ್ಯೆಯಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಮಳೆ ಸುರಿಯುವ ನಿರೀಕ್ಷೆ ಇರುವುದರಿಂದ ಸಮಸ್ಯೆಗಳು ಮತ್ತಷ್ಟು ಹೆಚ್ಚಲಿವೆ.