ಕುಡಿದ ಮತ್ತಲ್ಲಿ ಸಿಕ್ಕ‌ಸಿಕ್ಕ ಮನೆಗಳಿಗೆ ನುಗ್ಗಿದ ಆಸಾಮಿ: ಮೊಬೈಲ್, ವಾಚ್ ಕಳ್ಳತನ

ಬೆಂಗಳೂರಿನ ಇಂದಿರಾನಗರದಲ್ಲಿ ಮದ್ಯಪಾನ ಮಾಡಿದ ವ್ಯಕ್ತಿಯೊಬ್ಬ ಮನೆಗಳಿಗೆ ನುಗ್ಗಿ ಕಳ್ಳತನ ಮಾಡಿದ ಘಟನೆ ನಡೆದಿದೆ. ಸಿಸಿಟಿವಿ ಕ್ಯಾಮೆರಾದಲ್ಲಿ ವ್ಯಕ್ತಿಯ ಚಲನವಲನಗಳು ಸೆರೆಯಾಗಿದೆ. ಆತ ಅನೇಕ ಮನೆಗಳ ಕಿಟಕಿಯಲ್ಲಿ ಇಣುಕಿ ನೋಡಿದ್ದು, ಒಂದು ಮನೆಯಿಂದ ಮೊಬೈಲ್ ಮತ್ತು ವಾಚ್​ ಕಳ್ಳತನ ಮಾಡಿದ್ದಾನೆ. ಇಂದಿರಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.