ಸಭೆಯ ಬಳಿಕ ಸಿಎಂ ಸಿದ್ದರಾಮಯ್ಯ ಸುದ್ದಿಗಾರರೊಂದಿಗೆ ಮಾತನಾಡಿದರು. ಆ ವೇಳೆ ವರದಿಗಾರರು ರಾಜ್ಯದಲ್ಲಿ ಹುಲಿಗಳ ಸಂಖ್ಯೆ ಹೆಚ್ಚಾಗಿದೆ ಎಂದು ರಾಜ್ಯ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಕರ್ನಾಟಕದಲ್ಲಿ ಹುಲಿಗಳ ಸಂಖ್ಯೆಯಲ್ಲಿ ಏರಿಕೆಯಾಗಿದೆ ಎಂದು ತಿಳಿಸಿರುವುದಾಗಿ ಗಮನ ಸೆಳೆದರು. ಅದಕ್ಕೆ ಸಿಎಂ ಸಿದ್ದರಾಮಯ್ಯ ಅವರು ಹೆಚ್ಚೇನೂ ಪ್ರತಿಕ್ರಿಯೆ ನೀಡಲಿಲ್ಲವಾದರೂ ಅವರ ಜೊತೆಗಿದ್ದವರು ಹೌದು ಹುಲಿಯಾ (Houdu huliya) ಹುಲಿಗಳ ಸಂಖ್ಯೆ ಏರಿಕೆಯಾಗಿದೆಯಂತೆ. ಆದರೆ ಕರ್ನಾಟಕಕ್ಕೆ ಒಬ್ಬರೇ ಹುಲಿ- ಅದು ಸಿಎಂ ಸಿದ್ದರಾಮಯ್ಯ ಅವರು ನಗೆಯಾಡಿದರು. ಅಂದಹಾಗೆ ಅಂತಾರಾಷ್ಟ್ರೀಯ ಹುಲಿ ದಿನಕ್ಕೆ (International Tiger Day-2023) 2 ದಿನಗಳ ಮುನ್ನ ರಾಷ್ಟ್ರೀಯ ಪ್ರಾಣಿ ಹುಲಿ ಗಣತಿಯ ವಿವರಗಳನ್ನು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ನಿನ್ನೆ (ಜುಲೈ 27) ಬಿಡುಗಡೆ ಮಾಡಿದ್ದಾರೆ.