ಗ್ರಾಮಸ್ಥರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ

ತಮ್ಮ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿದ್ದನ್ನು ಹೈಕೋರ್ಟ್ ನಲ್ಲಿ ಪ್ರಶ್ನಿಸಿದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಕೊಂಚ ಗೆಲುವಾಗಿದ್ದಾರೆ. ಅವರ ಪರ ವಾದಿಸಲು ಭಾರತದ ಖ್ಯಾತ ವಕೀಲರಲ್ಲಿ ಒಬ್ಬರಾಗಿರುವ ಡಾ ಅಭಿಷೇಕ್ ಮನು ಸಿಂಘ್ವಿ ಆಗಮಿಸಿದ್ದರು. ಮುಡಾ ಪ್ರಕರಣದ ದೂರುಗಳನ್ನು ಆಗಸ್ಟ್ 29ರವರೆಗೆ ವಿಚಾರಣೆ ನಡೆಸದಂತೆ ಹೈಕೋರ್ಟ್ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸೂಚನೆ ನೀಡಿದೆ.