ರೈಲ್ವೆ ಟಿಕೆಟ್ ಕಲೆಕ್ಟರ್ ವೇಗಕ್ಕೆ ಶರಣಾದ ಕ್ರಿಕೆಟ್ ಸಾಮ್ರಾಟ..!
ದೆಹಲಿ ಮತ್ತು ರೈಲ್ವೇಸ್ ನಡುವೆ ನಡೆಯುತ್ತಿರುವ ಪಂದ್ಯದಲ್ಲಿ ವಿರಾಟ್ ತನ್ನ ಮೊದಲ ಇನ್ನಿಂಗ್ಸ್‌ನಲ್ಲಿ ಕೇವಲ 6 ರನ್ ಗಳಿಸಲಷ್ಟೇ ಶಕ್ತರಾದರು. ಹೀಗಾಗಿ ರನ್ ಸಾಮ್ರಾಟನ ಬ್ಯಾಟಿಂಗ್ ಆನಂದಿಸಲು ಕ್ರೀಡಾಂಗಣಕ್ಕೆ ಬಂದಿದ್ದ ಸಾವಿರಾರು ಅಭಿಮಾನಿಗಳು ಬೇಸರದಿಂದಲೇ ಮೈದಾನದಿಂದ ಹೊರನಡೆದಿದ್ದಾರೆ.