ಇಷ್ಟು ಸಂಖ್ಯೆಯಲ್ಲಿ ಕಾರ್ಯಕರ್ತರು ಮತ್ತು ಜನ ಸೇರುತ್ತಾರೆಂದು ಯಾರೂ ಎಣಿಸಿರಲಿಲ್ಲ. ಬಿಜೆಪಿ ನಾಯಕರಾದ ಸಿಟಿ ರವಿ ಮತ್ತು ಆರ್ ಅಶೋಕ ಮತ್ತು ಇತರ ಕೆಲವರನ್ನು ಪೊಲೀಸರು ವಶಕ್ಕೆ ಪಡೆದು ಬಸ್ಗಳಲ್ಲಿ ಕರೆದೊಯ್ದಿದ್ದು ನಿಜವಾದರೂ ಪೊಲೀಸರ ಕ್ರಿಯೆ ಉಳಿದ ಕಾರ್ಯಕರ್ತರ ಮೇಲೆ ಪ್ರಭಾವ ಬೀರಲಿಲ್ಲ. ಬೆಳಗ್ಗೆ ಕೆಲ ಕಾರ್ಯಕರ್ತರಿಂದ ಖರ್ಗೆ ನಿವಾಸಕ್ಕೆ ಮುತ್ತಿಗೆ ಹಾಕುವ ಪ್ರಯತ್ನವೂ ನಡೆಯಿತು.