ಪೆನ್ ಡ್ರೈವ್ ಗಳ ವಿಷಯ 4-5 ತಿಂಗಳುಗಳಿಂದ ಹರಿದಾಡುತಿತ್ತು, ಅದರೆ ಅವುಗಳನ್ನು ಸಾರ್ವಜನಿಕಗೊಳಿಸದಂತೆ ನ್ಯಾಯಲಯದಿಂದ ತಡೆಯಾಜ್ಞೆ ತಂದಿದ್ದ ಕಾರಣ ಅವು ಬೆಳಕಿಗೆ ಬಂದಿರಲಿಲ್ಲ ಎಂದು ಹೇಳಿದರು. ಮಾಜಿ ಸಂಸದ ಎಲ್ ಆರ್ ಶಿವರಾಮೇಗೌಡ ಮತ್ತು ವಕೀಲ ದೇವರಾಜೇಗೌಡ ಅವರು ದಿನಕ್ಕೊಂದು ಪತ್ರಿಕಾ ಗೋಷ್ಟಿ ನಡೆಸುತ್ತಿರುವ ಔಚಿತ್ಯವನ್ನು ಶಿವಲಿಂಗೇಗೌಡ ಪ್ರಶ್ನಿಸಿದರು.