ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಹಲವಾರು ಸಚಿವರು ತಾವು ಸ್ಪರ್ಧಿಸುವ ಬದಲು ತಮ್ಮ ಮಕ್ಕಳನ್ನು ಕಣಕ್ಕಿಳಿಸಿದ್ದಾರೆ. ಇದು ಅವರ ಹತಾಷೆಯ ಮತ್ತೊಂದು ಪ್ರತೀಕ ಯಾಕೆಂದರೆ ರಾಜ್ಯದಲ್ಲಿ ರಾಜಕೀಯ ವಾತಾವರಣ ತಮಗೆ ಪ್ರತಿಕೂಲವಾಗಿದೆ ಅಂತ ಅವರಿಗೆ ಗೊತ್ತಿದೆ ಎಂದು ಬೊಮ್ಮಾಯಿ ಹೇಳಿದರು.