ಬೆಳ್ಳಂಬೆಳಿಗ್ಗೆ ಗ್ರಾಮದೊಳಗೆ ಎಂಟ್ರಿ ಕೊಟ್ಟ ಒಂಟಿ ಸಲಗ

ಹಾಸನ ಜಿಲ್ಲೆಯಲ್ಲಿ ಕಾಡಾನೆಗಳ ಉಪಟಳ ಹೆಚ್ಚಾಗಿದೆ. ಬೇಲೂರು ತಾಲೂಕಿನ ಕಣಗುಪ್ಪೆ ಗ್ರಾಮದೊಳಗೆ ಬೆಳ್ಳಂಬೆಳಿಗ್ಗೆ ಒಂಟಿ ಸಲಗವೊಂದು ಬಂದಿದೆ. ಕಾಡಾನೆ ಕಂಡು ಗ್ರಾಮಸ್ಥರು ಭಯ ಭೀತರಾಗಿದ್ದಾರೆ. ಇನ್ನು ಒಂಟಿ ಸಲಗ ಗ್ರಾಮದೊಳಗೆ ಹಾದು ಕಾಫಿತೋಟದತ್ತ ಹೋಗಿದೆ.