ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರ ಸಮುದ್ರದಲ್ಲಿ ಬೆಂಗಳೂರು ಮೂಲದ ಓರ್ವ ವಿದ್ಯಾರ್ಥಿ ಮೃತಪಟ್ಟಿದ್ದಾನೆ. ಹೀಗಾಗಿ ಪೊಲೀಸರು ಮುರುಡೇಶ್ವರ ಕಡಲ ತೀರದಲ್ಲಿ ಪ್ರವಾಸಿಗರಿಗೆ ನಿರ್ಬಂಧಿಸಿದ್ದಾರೆ. ದಸರಾ ರಜೆ ಮತ್ತು ವೀಕೆಂಡ್ ಎಂಜಾಯ್ ಮಾಡಲು ಬಂದ ಪ್ರವಾಸಿಗರು ಬೇಸರದಿಂದ ತಮ್ಮೂರಿಗೆ ಮರಳುತ್ತಿದ್ದಾರೆ.