ಮುಸ್ಲಿಂ ವಿದ್ಯಾರ್ಥಿನಿಯರಿಂದ ಪ್ರತಿಭಟನಾ ರ್ಯಾಲಿ

ಫಯಾಜ್ ಹೆಸರಿನ ನರರಾಕ್ಷಸನ ಹೇಯಕೃತ್ಯಕ್ಕೆ ರಾಜ್ಯದೆಲ್ಲೆಡೆ ಆಕ್ರೋಶ ವ್ಯಕ್ತವಾಗಿದೆ. ಅವನನ್ನು ಗಲ್ಲಿಗೇರಿಸಿ ಎಂಬ ಕೂಗೂ ಎಲ್ಲ ಕಡೆ ಕೇಳಿಬರುತ್ತಿದೆ. ವಿರೋಧ ಪಕ್ಷಗಳ ನಾಯಕರು ಪ್ರಕರಣವನ್ನು ಸಿಬಿಐ ತನಿಖೆ ಒಪ್ಪಿಸಬೇಕೆಂದು ಸರ್ಕಾರದ ಮೇಲೆ ಒತ್ತಡ ಹೇರುತ್ತಿದ್ದಾರೆ.