ತಮಿಳುನಾಡಿನ ಕುಂಬಕೋಣಂನ ಪ್ರತ್ಯಂಗಿರ ದೇವಿ ದೇವಸ್ಥಾನಕ್ಕೆ ಇಂದು ಕುಟುಂಬ ಸಮೇತ ಭೇಟಿ ನೀಡಿದ್ದ ಡಿಸಿಎಂ ಡಿಕೆ ಶಿವಕುಮಾರ್ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ತಿರುಪತಿಯಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ. ಮೇಕೆದಾಟು ಯೋಜನೆಯ ವಿಳಂಬಕ್ಕೆ ರಾಜಕೀಯ ಕಾರಣಗಳನ್ನು ನೀಡಿದ್ದಾರೆ.