ಒಡಿಶಾದಲ್ಲಿ ರ‍್ಯಾಲಿ ವೇಳೆ ಪ್ರಜ್ಞೆ ತಪ್ಪಿ ಬಿದ್ದ ಪತ್ರಕರ್ತ; ಭಾಷಣ ನಿಲ್ಲಿಸಿದ ಪ್ರಧಾನಿ ಮೋದಿ

ಚುನಾವಣಾ ರ‍್ಯಾಲಿಗಳಲ್ಲಿ ಮಾತನಾಡುವಾಗ ಸಭೆಯಲ್ಲಿ ಸೇರಿದ್ದ ಜನರನ್ನು ಸೂಕ್ಷ್ಮವಾಗಿ ಗಮನಿಸುವ ಪ್ರಧಾನಿ ನರೇಂದ್ರ ಮೋದಿ ಇಂದು ಕೂಡ ತಮ್ಮ ಭಾಷಣದ ವೇಳೆ ಮೂರ್ಛೆ ತಪ್ಪಿ ಬಿದ್ದ ಪತ್ರಕರ್ತನನ್ನು ಗಮನಿಸಿದ್ದಾರೆ. ಈ ವೇಳೆ ತಮ್ಮ ಭಾಷಣವನ್ನು ನಿಲ್ಲಿಸಿದ ಅವರು ಅವರ ವೈದ್ಯಕೀಯ ತಂಡವನ್ನು ಕರೆದು, ಆದಷ್ಟು ಬೇಗ ಆ ಪತ್ರಕರ್ತನನ್ನು ತಪಾಸಣೆ ಮಾಡಲು ಸೂಚಿಸಿದರು. ಆತನಿಗೆ ಬೇಗ ಯಾರಾದರೂ ನೀರು ಕೊಡಿ. ಅವರಿಗೆ ಗಾಳಿ ಬೇಕಾಗಿದೆ ಎಲ್ಲರೂ ಸ್ವಲ್ಪ ದೂರ ಸರಿಯಿರಿ. ನಮ್ಮ ವೈದ್ಯರ ತಂಡ ಆತನನ್ನು ತಪಾಸಣೆ ಮಾಡುತ್ತದೆ. ನೀವು ಯಾರೂ ಚಿಂತಿಸಬೇಡಿ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.