ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್

ಅಮೂಲ್ಯ ಅವರ ಸಹೋದರ ದೀಪಕ್ ಅರಸ್​ ನಿಧನರಾಗಿದ್ದು ಚಿತ್ರರಂಗದಲ್ಲಿ ಶೋಕ ಆವರಿಸಿದೆ. ನಿರ್ದೇಶಕ ತರುಣ್ ಸುಧೀರ್ ಅವರು ಬಂದು ಅಂತಿಮ ದರ್ಶನ ಪಡೆದಿದ್ದಾರೆ. ಅವರ ಜೊತೆ ಪತ್ನಿ ಸೋನಲಾ ಮಾಂತೆರೋ ಕೂಡ ಆಗಮಿಸಿದ್ದಾರೆ. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ತರುಣ್ ಸುಧೀರ್​ ಅವರು ದೀಪಕ್ ಜೊತೆಗಿನ ಒಡನಾಟ ನೆನಪಿಸಿಕೊಂಡರು.