ರಾಮನ ಪೂಜೆ ಮಾಡಿದ್ದಕ್ಕೆ ಜೈಲಿನಲ್ಲಿ ಹಲ್ಲೆ: ಪ್ರಧಾನಿ ಮೋದಿ ಸಹಾಯ ಕೋರಿದ ಆರೋಪಿ

ರಾಮನ ಪೂಜೆ ಮಾಡಿ ಪ್ರಸಾದ ವಿತರಣೆ ಮಾಡಿದ್ದಕ್ಕೆ ಅನ್ಯಕೋಮಿನ ಆರೋಪಿ ಶೇಖ್ ಮೋದಿ ಹಾಗೂ ಇತರರರು ನಮ್ಮ ಮೇಲೆ ಹಲ್ಲೆ ಮಾಡಿದರು. ಆದರೆ ಜೈಲು ಅಧಿಕಾರಿ, ಸಿಬ್ಬಂದಿ ನಮ್ಮ ರಕ್ಷಣೆಗೆ ಬರಲಿಲ್ಲ. ಬದಲಾಗಿ ಈಗ ನಮ್ಮನ್ನು ಜೈಲು ಆವರಣದಲ್ಲಿ ಬಿಡದೇ ಸೆಲ್ ನಲ್ಲಿಟ್ಟಿದ್ದಾರೆ ಎಂದು ಸಂತ್ರಸ್ತ ಆರೋಪಿ ಮಹಾರಾಷ್ಟ್ರ ಮೂಲದ ಪರಮೇಶ್ವರ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದಾನೆ.