ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾಷಷ್ಠಿ ಮಹೋತ್ಸವಕ್ಕೆ ಬೆಳಗ್ಗೆ 7.30ರ ಧನುಲಗ್ನ ಮುಹೂರ್ತದಲ್ಲಿ ಅದ್ಧೂರಿ ಚಾಲನೆ ಸಿಕ್ಕಿದೆ. ಸಾವಿರಾರು ಭಕ್ತರು ಬ್ರಹ್ಮ ರಥೋತ್ಸವ ಕಣ್ತುಂಬಿಕೊಂಡಿದ್ದಾರೆ. ಮಾರ್ಗಶಿರ ಮಾಸದಲ್ಲಿ ಬರುವ ಷಷ್ಠಿಯೇ ಸುಬ್ರಹ್ಮಣ್ಯ ಷಷ್ಠಿ. ಇದು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಡೆಯುವ ದೊಡ್ಡ ಉತ್ಸವ.