ಬೆಳಗಾವಿ ಜಿಲ್ಲೆಯ ಎರಡು ಲೋಕಸಭಾ ಕ್ಷೇತ್ರಗಳಲ್ಲದೆ ಕಾರವಾರದ ಬಿಜೆಪಿ ಅಭ್ಯರ್ಥಿಯನ್ನು ಸಹ ಗೆಲ್ಲಿಸುತ್ತೇವೆ ಎಂದು ಅವರು ಹೇಳಿದರು. ವಿಧಾನ ಸಭಾ ಚುನಾವಣೆಯಲ್ಲಿ ಜಿಲ್ಲಾ ಬಿಜೆಪಿ ಘಟಕದಿಂದ ಜರುಗಿದ ಪ್ರಮಾದಗಳು ಪುನರಾವರ್ತನೆಗೊಳ್ಳಲಾರವು ಎಂದು ಹೇಳುವ ಶಶಿಕಲಾ ಜೊಲ್ಲೆ ರಮೇಶ್ ಜಾರಕಿಹೊಳಿ ಅವರ ನಾಯಕತ್ವದಲ್ಲಿ ವಿಶ್ವಾಸ ವ್ಯಕ್ತಪಡಿಸುತ್ತಾರೆ.