ಶಾನ್ವಿ ಶ್ರೀವಾಸ್ತವ ಅವರು ಗ್ಲಾಮರ್ ಲುಕ್ನಲ್ಲಿ ಎಲ್ಲರ ಗಮನ ಸೆಳೆದವರು. ಈಗ ಅವರು ಗ್ಯಾಂಗಸ್ಟರ್ ಅವತಾರದಲ್ಲಿ ಪ್ರೇಕ್ಷಕರ ಎದುರು ಬರಲು ರೆಡಿ ಆಗಿದ್ದಾರೆ. ಅವರು 11 ವರ್ಷಗಳ ಹಿಂದೆ ಚಿತ್ರರಂಗಕ್ಕೆ ಕಾಲಿಟ್ಟರು. ಒಂದು ದಶಕದಲ್ಲಿ ಅವರು ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಈ ಬಗ್ಗೆ ಅವರು ಖುಷಿ ಹಂಚಿಕೊಂಡಿದ್ದಾರೆ. ‘11 ವರ್ಷಗಳ ಹಿಂದೆ ನಾನು ಚಿತ್ರರಂಗಕ್ಕೆ ಆಗತಾನೇ ಕಾಲಿಟ್ಟಿದ್ದೆ. ಆಗ ನನಗೆ ಏನು ಮಾತನಾಡಬೇಕು ಎಂದು ತಿಳಿಯುತ್ತಿರಲಿಲ್ಲ. ಈಗ ನನ್ನ ಬಗ್ಗೆ ನನಗೆ ಹೆಮ್ಮೆ ಇದೆ’ ಎಂದಿದ್ದಾರೆ ಅವರು.