ಕಾಂಗ್ರೆಸ್ ನಾಯಕಿ ಮತ್ತು ವಯನಾಡು ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಕುರಿತಾದ ವೀಡಿಯೊವೊಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಕೇರಳದ ವಯನಾಡ್‌ನಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಅನಾವರಣಗೊಳಿಸಬೇಕಿದ್ದ ನಾಮಫಲಕವು ಉದ್ಘಾಟನೆಗೊಳ್ಳುವ ಮುನ್ನವೇ ವೇದಿಕೆ ಮೇಲೆ ಮುರಿದುಬಿದ್ದಿರುವ ಘಟನೆ ನಡೆದಿದೆ. ಈ ಘಟನೆ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ.