ನಟಿ ಪವಿತ್ರಾ ಗೌಡ ಜೈಲು ಪಾಲಾಗಿದ್ದಾರೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಪವಿತ್ರಾ ಗೌಡ ಪ್ರಮುಖ ಆರೋಪಿ ಆಗಿದ್ದು, ಇಂದು (ಜೂನ್ 20) ಅವರ ಪೊಲೀಸ್ ಕಸ್ಟಡಿ ಅಂತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಕೋರ್ಟ್ಗೆ ಹಾಜರುಪಡಿಸಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಲಯವು ಪವಿತ್ರಾ ಗೌಡ ಸೇರಿ ಹಲವು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಕಳಿಸಿದೆ. ಕೋರ್ಟ್ನಲ್ಲಿ ವಿಚಾರಣೆ ಮುಗಿಸಿ ಪೊಲೀಸ್ ವ್ಯಾನ್ ಹತ್ತಿದಾಗ ಅವರನ್ನು ನೋಡಲು ಪುತ್ರಿ ಖುಷಿ ಗೌಡ ಆಗಮಿಸಿದ್ದರು. ನೂಕುನುಗ್ಗಲಿನ ನಡುವೆ ತಾಯಿ ಜೊತೆ ಮಾತನಾಡಲು ಖುಷಿ ಗೌಡ ಹರಸಾಹಸ ಪಡಬೇಕಾಯಿತು. ಪವಿತ್ರಾ ಗೌಡ ಅವರ ಕುಟುಂಬದ ಇತರೆ ಸದಸ್ಯರು ಕೂಡ ಪೊಲೀಸ್ ವ್ಯಾನ್ನ ಪಕ್ಕದಲ್ಲಿ ನಿಂತು ಮಾತನಾಡಿದರು. ನ್ಯಾಯಾಂಗ ಬಂಧನಕ್ಕೆ ಒಳಗಾಗಿರುವ ಪವಿತ್ರಾ ಗೌಡ ಅವರನ್ನು ಪರಪ್ಪನ ಅಗ್ರಹಾರಕ್ಕೆ ಶಿಫ್ಟ್ ಮಾಡಲಾಗಿದೆ. ಚಿತ್ರದುರ್ಗದ ರೇಣುಕಾ ಸ್ವಾಮಿಯ ಭೀಕರ ಹತ್ಯೆಯಲ್ಲಿ ಪವಿತ್ರಾ ಗೌಡ ಎ1, ದರ್ಶನ್ ಎ2 ಆಗಿದ್ದಾರೆ.