ಐಪಿಎಲ್ ಹರಾಜಿನಲ್ಲಿ ಹರಾಜಾದ ಅತ್ಯಂತ ಕಿರಿಯ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದ ವೈಭವ್, ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಆಡುವ ಹನ್ನೊಂದರ ಬಳಗದಲ್ಲಿ ಅವಕಾಶ ಗಿಟ್ಟಿಸಿಕೊಳ್ಳುವ ಮೂಲಕ ಕೇವಲ 14 ವರ್ಷ ಮತ್ತು 27 ದಿನಗಳ ವಯಸ್ಸಿನಲ್ಲಿ ಐಪಿಎಲ್‌ಗೆ ಪಾದಾರ್ಪಣೆ ಮಾಡುವ ಮೂಲಕ ಇತಿಹಾಸ ಸೃಷ್ಟಿಸಿದ್ದರು. ಇದೀಗ ಯಶಸ್ವಿ ಜೈಸ್ವಾಲ್ ಜೊತೆ ಆರಂಭಿಕನಾಗಿ ಕಣಕ್ಕಿಳಿದಿರುವ ವೈಭವ್ ತಮ್ಮ ಐಪಿಎಲ್ ವೃತ್ತಿಜೀವನದ ಮೊದಲ ಎಸೆತದಲ್ಲೇ ಅದ್ಭುತ ಸಿಕ್ಸರ್ ಬಾರಿಸುವ ಮೂಲಕ ಇಡೀ ಜಗತ್ತನ್ನೇ ಅಚ್ಚರಿಗೊಳಿಸಿದ್ದಾರೆ.