ಪೋಕ್ಸೋ ಪ್ರಕರಣದ ಆರೋಪಿಗೆ ಚಪ್ಪಲಿ ಹಾರ ಹಾಕಿ ಗ್ರಾಮದಲ್ಲಿ ಮೆರವಣಿಗೆ

ಬೆಳಗಾವಿ ಜಿಲ್ಲೆಯ ದೊಡ್ಡವಾಡ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮವೊಂದರಲ್ಲಿ ಪೋಕ್ಸೋ ಪ್ರಕರಣದ ಆರೋಪಿಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿದ್ದಾರೆ. ಪೋಕ್ಸೋ ಪ್ರಕರಣದಲ್ಲಿ ಮೂರು ತಿಂಗಳ ಹಿಂದೆ ಜೈಲಿಗೆ ಹೋಗಿದ್ದ ಆರೋಪಿ ಇದೀಗ ಜಾಮೀನಿನ ಮೇಲೆ ಹೊರಗೆ ಬಂದಿದ್ದಾನೆ. ಗ್ರಾಮಕ್ಕೆ ಬಂದ ಆರೋಪಿ​ಗೆ ಸಂತ್ರಸ್ತೆ ಚಪ್ಪಲಿಯಿಂದ ಹೊಡೆದಿದ್ದಾಳೆ.