ಬೆಂಗಳೂರು ವಿವಿ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ

ಸರ್ಕಾರ ಮತ್ತು ಸಂಬಂಧಪಟ್ಟ ಇಲಾಖೆಯ ಮಂತ್ರಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯ, ಮೌನ ಅರ್ಥವಾಗಲ್ಲ ಮಾರಾಯ್ರೇ. ಇಲ್ಲಿರುವ ವಿದ್ಯಾರ್ಥಿಗಳು ಓದಲು ಬಂದಿರುವವರು, ಅವರಿಗೆ ಸಮಯಕ್ಕೆ ಸರಿಯಾಗಿ, ಉತ್ತಮ ಗುಣಮಟ್ಟದ ಆಹಾರ ನೀಡದಿದ್ದರೆ ಓದಿನ ಮೇಲೆ ಗಮನ ಕೇಂದ್ರೀಕರಿಸುವುದು ಹೇಗೆ ಸಾಧ್ಯವಾದೀತು? ಸರ್ಕಾರ ಕೂಡಲೇ ಎಚ್ಚೆತ್ತುಕೊಳ್ಳದಿದ್ದರೆ ವಿದ್ಯಾರ್ಥಿಗಳ ಆಕ್ರೋಶ ಹೆಚ್ಚುವುದು ನಿಶ್ಚಿತ.